HomeKarnatakaಎಂ.ಕೆ.ಪ್ರಾಣೇಶ್ ಬಿಗ್ ಶಾಕ್: ಪರಿಷತ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ; ಗಾಯತ್ರಿ ಶಾಂತೇಗೌಡ ವಿಜೇತೆ

ಎಂ.ಕೆ.ಪ್ರಾಣೇಶ್ ಬಿಗ್ ಶಾಕ್: ಪರಿಷತ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ; ಗಾಯತ್ರಿ ಶಾಂತೇಗೌಡ ವಿಜೇತೆ

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಂ.ಕೆ .ಪ್ರಾಣೇಶ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ನಾಮನಿರ್ದೇಶಿತ ಸದಸ್ಯರ ಮತ ಅಸಿಂಧುಗೊಂಡ ಹಿನ್ನೆಲೆಯಲ್ಲಿ ಎಂ.ಕೆ.ಪ್ರಾಣೇಶ್ ಆಯ್ಕೆ ರದ್ದುಗೊಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ವಿಜೇತರಾಗಿದ್ದಾರೆ ಎಂದು ತೀರ್ಪು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2021ರ ಡಿಸೆಂಬರ್ ನಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಂ.ಕೆ.ಪ್ರಾಣೇಶ್ ಆರು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಅವರು ಚುನಾವಣೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಮೂರು ಸ್ಥಳೀಯ ಪಟ್ಟಣ ಪಂಚಾಯತ್ ನ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು,. ಆದರೆ ಅವರಿಗೆ ಮತದಾನಕ್ಕೆ ಅವಕಾಶವಿರಲಿಲ್ಲ ಎಂದು ಗಾಯತ್ರಿ ವಾದ ಮಂಡಿಸಿದ್ದರು. ಗಾಯತ್ರಿ ಅವರ ವಾದ ಮನ್ನಿಸಿದ ಹೈಕೋರ್ಟ್ 12 ಸದಸ್ಯರ ಮತಗಳನ್ನು ಪ್ರತ್ಯೇಕವಾಗಿರಿಸಿ ಮತಗಳ ಮರು ಎಣಿಕೆಗೆ ಸೂಚನೆ ನೀಡಿತ್ತು.

ಅದರಂತೆ 2025ರ ಫೆ.28ರಂದು ಮರು ಎಣಿಕೆ ನಡೆದಿದ್ದು ಮುಚ್ಚಿದ ಲಕೋಟೆಯಲ್ಲಿ ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ಮಧ್ಯೆ ಮತ ಮರು ಎಣಿಕೆಗೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಪ್ರಾಣೇಶ್ ಸುಪ್ರಿಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪನ್ನು ಜಾರಿ ಮಾಡಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಗಾಯತ್ರಿ ಶಾಂತೇಗೌಡ ಅವರ ಅರ್ಜಿ ವಿಚಾರಣೆ ಇಂದು ನಡೆದಿದ್ದು, ಎಂ.ಕೆ.ಪ್ರಾಣೇಶ್ ಆಯ್ಕೆಯನ್ನು ಅಸಿಂಧುಗೊಳಿಸಿದ ನ್ಯಾಯ ಪೀಠ, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜೇತರಾಗಿದ್ದಾರೆ ಎಂದು ಪ್ರಕಟಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular