HomeLatest NewsBREAKING : ತಮಿಳುನಾಡು CM ಹುದ್ದೆಗೆ 'ಎಂ.ಕೆ ಸ್ಟಾಲಿನ್' ರಾಜೀನಾಮೆ |M.K. Stalin resigns 

BREAKING : ತಮಿಳುನಾಡು CM ಹುದ್ದೆಗೆ ‘ಎಂ.ಕೆ ಸ್ಟಾಲಿನ್’ ರಾಜೀನಾಮೆ |M.K. Stalin resigns 

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷವು ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ 59 ಸ್ಥಾನಗಳಿಗೆ ಸೀಮಿತವಾದ ಡಿಎಂಕೆ ಅಧಿಕಾರ ಕಳೆದುಕೊಂಡಿದ್ದು, ಸ್ಟಾಲಿನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಇದೇ ವೇಳೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಮುಂದಿನ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ತಮಿಳುನಾಡು ರಾಜಕೀಯದಲ್ಲಿ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಸರ್ಕಾರ ರಚನೆಯ ಪ್ರಯತ್ನದಲ್ಲಿ ಟಿವಿಕೆ (TVK) ಪಕ್ಷವು ಇತರ ಪಕ್ಷಗಳೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿದೆ.

ಮತ್ತೊಂದೆಡೆ, ಚುನಾವಣೆಯಲ್ಲಿನ ಭೀಕರ ಸೋಲಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದಾರೆ. ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಸ್ಟಾಲಿನ್, “ಜನರ ತೀರ್ಪನ್ನು ನಾನು ಶಿರಸಾವಹಿಸಿ ಒಪ್ಪಿಕೊಳ್ಳುತ್ತೇನೆ. ಇನ್ನು ಮುಂದೆ ಡಿಎಂಕೆ ಪಕ್ಷವು ಪ್ರಬಲ ಪ್ರತಿಪಕ್ಷವಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದೆ” ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಎಂಕೆ ಹೀನಾಯ ಸೋಲು: ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ ಪಕ್ಷವು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು, ಕೇವಲ 59 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಕೊಳತ್ತೂರು ಕ್ಷೇತ್ರದಲ್ಲಿ ಡಿಎಂಕೆ ಅಧಿನೇತ ಸ್ಟಾಲಿನ್ ಸೇರಿದಂತೆ ಬಹುತೇಕ ಸಚಿವರು ಸೋಲನ್ನಪ್ಪಿದ್ದಾರೆ. ಆದರೆ, ಚೆಪಾಕ್ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಹಾಗೂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಮಾತ್ರ ಗೆಲುವು ಸಾಧಿಸಿದ್ದಾರೆ. ಇಂದು ಸ್ಟಾಲಿನ್ ಅಧ್ಯಕ್ಷತೆಯಲ್ಲಿ ಡಿಎಂಕೆ ಸಭೆ ನಡೆಯಲಿದ್ದು, ಸೋಲಿನ ಪರಾಮರ್ಶೆ ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗುವುದು. ಇದೇ ವೇಳೆ ಪ್ರತಿಪಕ್ಷದ ನಾಯಕನಾಗಿ ಉದಯನಿಧಿ ಸ್ಟಾಲಿನ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular