ಮಡಿಕೇರಿ: ಬಿಜೆಪಿ ನಾಯಕ, ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ನ್ನು ಎಸ್ ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್ ರೇವಣ್ಣನಂತೆ ಪ್ರತಾಪ್ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್, 2023ರರಲ್ಲಿ ಸಂಸತ್ ಭದ್ರತಾ ಉಲ್ಲಂಘನೆ ಬಳಿಕ ಪೊಲೀಸರು ಪ್ರತಾಪ್ ಸಿಂಹ ಮೊಬೈಲ್ ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್ ನಲ್ಲಿ ನಗ್ನ ಚಿತ್ರಗಳು, ವಿಡಿಯೋಗಳು ಪತ್ತೆಯಾಗಿವೆ. ಇದನ್ನು ನೋಡಿದ ಅಮಿತ್ ಶಾ ಅವರೇ ದುಗ್ಭ್ರಮೆಯಾಗಿದ್ದರು. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ರೀತಿಯೇ ಪ್ರತಾಪ್ ಸೊಂಹ ಮೊಬೈಲ್ ನಲ್ಲಿ ವಿಡಿಯೋಗಳಿವೆ. ಅಂತಹ ವಿಡಿಯೋ ಇರುವುದಕ್ಕೆ ಗೃಹ ಸಚಿವರು ಅವರ ಮೊಬೈಲ್ ಸೀಜ್ ಮಾಡಿಸಿದ್ದರು. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ನೀಡಬಾರದೆಂಬ ನಿರ್ಧಾರಕ್ಕೆ ಬಂದರು. ಇಂತಹ ಪ್ರತಾಪ್ ಸಿಂಹಗೆ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪ್ರದೀಪ್ ಈಶ್ವರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಬೈಯ್ಯುವುದೇ ಕೆಲಸವಾಗಿದೆ ಎಂದು ವಾಗ್ದಾಳಿ ನಡೆಸಿದರು.