BIG NEWS: ಈಗ ಬಿಜೆಪಿ ಕಚೇರಿಯಲ್ಲಿ ಕುಳಿತವರು ಪಂಚಾಯಿತಿ ಚುನಾವಣೆಯನ್ನೂ ಗೆಲ್ಲಲ್ಲ; ಸ್ವಪಕ್ಷದ ವಿರುದ್ಧ ಮತ್ತೆ ಕಿಡಿ ಕಾರಿದ ರೇಣುಕಾಚಾರ್ಯ

ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಗುಂಪುಗಾರಿಕೆ ಸ್ಫೋಟಗೊಂಡಿದ್ದು, ಸ್ವಪಕ್ಷದ ವಿರುದ್ಧವೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಈಗ ಬಿಜೆಪಿ ಕಚೇರಿಯಲ್ಲಿ ಕುಳಿತವರು ಪಂಚಾಯಿತಿ ಚುನವಣೆಯನ್ನೂ ಗೆಲ್ಲಲ್ಲ. ಅವರು ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ.

ತಮಗೆ ಶೋಕಾಸ್ ನೊಟೀಸ್ ನೀಡಿರುವ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ಸಂಪೂರ್ಣ ಡ್ಯಾಮೇಜ್ ಆದ ಬಳಿಕ ಈಗ ಎಲ್ಲರೂ ಯಡಿಯೂರಪ್ಪ ನಾಯಕತ್ವ ಎಂದು ಹೇಳುತ್ತಿದ್ದರು. ಈ ಹಿಂದೆ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವೈರಲ್ ಆಗಿತ್ತು. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಈಶ್ವರಪ್ಪರನ್ನು ಮುಗಿಸುವುದಾಗಿ ಹೇಳಿದ್ದರು. ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪರನ್ನೇ ಅಧಿಕಾರದಿಂದ ಕೆಳಗಿಳಿಸಿದ್ದರು. ಇದರ ಪರಿಣಾಮ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read