BIG NEWS: ಮುಸ್ಲಿಂರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ನಿಮ್ಮ ಆಸ್ತಿ ಮಾರಿ ಹಣ ಕೊಡಿ; ಸಿಎಂ ಸಿದ್ದರಾಮಯ್ಯ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು: ಮುಸ್ಲಿಂರ ಮೇಲೆ ಅಷ್ಟೊಂದು ಕಾಳಜಿ, ಪ್ರೀತಿ ಇದ್ದರೆ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಆಸ್ತಿಯನ್ನು ಮಾರಿ ಅವರಿಗೆ ಹಣ ಕೊಡಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಅಲ್ಪಸಂಖ್ಯಾತರಿಗೆ ಸರ್ಕಾರದಿಂದ 10 ಸಾವಿರ ಕೋಟಿ ಘೋಷಣೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಹಳಷ್ಟು ಗೌರವವಿದೆ. ಸಿಎಂ ಆದವರು ಎಲ್ಲಾ ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಆದರೆ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಬಗ್ಗೆ ವಿಶೇಷ ಒಲವು ಹೊಂದಿದ್ದಾರೆ ಎಂದರು.

ನಮಗೆ ಸಂಘರ್ಷದ ಅಗತ್ಯವಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಇಲ್ಲಿ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯನವರು ನಾನು ಕುಂಕುಮ ಹಚ್ಚಲ್ಲ, ಕೇಸರಿ ಪೇಟಾ ಹಾಕಲ್ಲ ಎನ್ನುತ್ತಾರೆ. ಆದರೆ ನಿಮ್ಮ ಹೆಸರಲ್ಲೇ ಸಿದ್ದರಾಮ ಎಂದಿದೆ. ಮುಸ್ಲಿಂ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ನಿಮ್ಮ ಮನೆಯಿಂದ ಕೊಡಿ ಎಂದು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read