ಬಜರಂಗದಳ ನಿಷೇಧ ಕುರಿತಾಗಿ ಮಾಜಿ ಸಿಎಂ ಮೊಯ್ಲಿ ಮಹತ್ವದ ಹೇಳಿಕೆ: ಕಾಂಗ್ರೆಸ್ ಮುಂದೆ ಅಂತಹ ಪ್ರಸ್ತಾಪ ಇಲ್ಲವೆಂದು ಸ್ಪಷ್ಟನೆ

ಉಡುಪಿ: ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಕಾಂಗ್ರೆಸ್ ಮುಂದೆ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಘೋಷಣೆಯಿಂದ ಪಕ್ಷಕ್ಕೆ ಆಗುತ್ತಿರುವ ಹಾನಿ ತಡೆಯುವ ಪ್ರಯತ್ನ ಮಾಡಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಇಂತಹ ನಿಷೇಧ ಪ್ರಸ್ತಾವನೆ ಇರಲಿಲ್ಲ. ಮುಂದೆಯೂ ಇಲ್ಲ. ದ್ವೇಷ ರಾಜಕೀಯ ಮಾಡುವ ಸಂಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ಸುಪ್ರೀಂಕೋರ್ಟ್ ಸ್ಪಷ್ಟವಾದ ತೀರ್ಪು ನೀಡಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸಮಾಜದಲ್ಲಿ ಶಾಂತಿ ಕದಡುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read