HomeKarnatakaBREAKING NEWS: ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ

BREAKING NEWS: ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ

ವಿಜಯನಗರ: ರಾಜ್ಯದ ಪ್ರತಿ ಜಿಲ್ಲೆಗಳ ರಸ್ತೆ ರಸ್ತೆಯಲ್ಲಿಯೂ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಕ್ಕಳು, ಸಾರ್ವಜನಿಕರು ಜೀವ ಭಯದಲ್ಲಿ ಓಡಾಡಬೇಕಾದ ಸ್ಥಿತಿ ಎದುರಾಗಿದೆ. ಆದಾಗ್ಯೂ ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕದಿರುವುದು ದುರಂತವೇ ಸರಿ.

ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ನದೆಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರದಲ್ಲಿ ನಡೆದಿದೆ.

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿ, ಮಕ್ಕಳನ್ನು ಗಾಯಗೊಳಿಸಿದೆ. ಮಕ್ಕಳ ಕೈ-ಕಾಲು, ಮುಖಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular