HomeKarnatakaನನಗೆ ಯಾವುದೇ ಡ್ಯಾಮೇಜ್ ಆಗಿಲ್ಲ: ಪಕ್ಷದ ನಿರ್ಧಾರಕ್ಕೆ ಬದ್ಧ: ಮಾಡಾಳ್ ವಿರೂಪಾಕ್ಷಪ್ಪ

ನನಗೆ ಯಾವುದೇ ಡ್ಯಾಮೇಜ್ ಆಗಿಲ್ಲ: ಪಕ್ಷದ ನಿರ್ಧಾರಕ್ಕೆ ಬದ್ಧ: ಮಾಡಾಳ್ ವಿರೂಪಾಕ್ಷಪ್ಪ

ದಾವಣಗೆರೆ: ದೂರುದಾರ ಕಶ್ಯಪ್ ಯಾರೆಂದು ನನಗೆ ಗೊತ್ತಿಲ್ಲ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಪಕ್ಷಕ್ಕೆ ಮುಜುಗರ ಆಗುವುದಾದರೆ ಯಾವುದೇ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ಬಿಜೆಪಿಯಿಂದ ನನ್ನನ್ನು ಉಚ್ಚಾಟನೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭ್ರಷ್ಟಾಚಾರ ಆರೋಪದಿಂದ ನನಗೆ ಯಾವುದೇ ಡ್ಯಾಮೇಜ್ ಆಗಿಲ್ಲ. ಪಕ್ಷ ನನಗೆ ತಾಯಿ ಇದ್ದಂತೆ. ಎರಡು ಸಲ ಶಾಸಕನಾಗಿ ಮಾಡಿದೆ. ಪಕ್ಷ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಮುಖ್ಯಮಂತ್ರಿ ಹೇಳಿದ ತಕ್ಷಣ ಕೆ.ಎಸ್.ಡಿ.ಎಲ್. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. 48 ಗಂಟೆಯೊಳಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ. ಜಾಮೀನು ದೊರೆತ ನಂತರ ನಾನು ಯಾವುದೇ ಮೆರವಣಿಗೆ ಮಾಡಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular