HomeKarnatakaಎಲೆಕ್ಷನ್ ಹೊತ್ತಲ್ಲೇ ಅರೆಸ್ಟ್ ಆದ ಶಾಸಕ ಮಾಡಾಳ್ ಬಿಜೆಪಿಯಿಂದ ಉಚ್ಛಾಟನೆ...? ಪುತ್ರನಿಗಿಲ್ಲ ಟಿಕೆಟ್...?

ಎಲೆಕ್ಷನ್ ಹೊತ್ತಲ್ಲೇ ಅರೆಸ್ಟ್ ಆದ ಶಾಸಕ ಮಾಡಾಳ್ ಬಿಜೆಪಿಯಿಂದ ಉಚ್ಛಾಟನೆ…? ಪುತ್ರನಿಗಿಲ್ಲ ಟಿಕೆಟ್…?

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕುರಿತಾಗಿ ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಮುಜುಗರದಿಂದ ಪಾರಾಗಲು ಬಿಜೆಪಿ ವಿರೂಪಾಕ್ಷಪ್ಪ ಅವರನ್ನು ಉಚ್ಚಾಟಿಸಲಿದ್ದು, ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡುವ ಮತ್ತು ನೀಡದಿರುವ ಬಗ್ಗೆಯೂ ಚರ್ಚೆ ನಡೆದಿದೆ. ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿಯಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷದ ವಲಯದಲ್ಲಿ ಚರ್ಚೆ ನಡೆದಿದ್ದು, ಒಂದು ವೇಳೆ ಇದು ಕಾರ್ಯಕರ್ತಗೊಂಡಲ್ಲಿ ಮಾಡಾಳ್ ಪುತ್ರ ಮಲ್ಲಿಕಾರ್ಜುನಗೆ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಚುನಾವಣೆ ಹೊತ್ತಲ್ಲಿ ಶಾಸಕರ ಬಂಧನವಾಗಿರುವುದರಿಂದ ಮುಜುಗರದಿಂದ ಪಾರಾಗಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿದೆ. ಮಾಡಾಳ್ ಪುತ್ರನ ಬದಲಿಗೆ ಹೊಸ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular