ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಉದ್ವಿಗ್ನಗೊಂಡಿದ್ದ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮರಳಿದೆ.
ಸೆ.7ರಂದು ರಾತ್ರಿ ಗಣೇಶ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಕಳೆದ ಮೂರು ದಿನಗಳಿಂದ ಮದ್ದೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಹೀಂದೂಪರ ಸಂಘಟನೆಗಳು ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಮದ್ದೂರು ಬಂದ್ ಗೆ ಕರೆ ಕೊಟ್ಟಿದ್ದರು. ಬಳಿಕ ಬುಧವಾರ ಬಿಗಿ ಭದ್ರತೆಯಲ್ಲಿ ಮದ್ದೂರಿನಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಿತು.
ಇದರಿಂದಾಗಿ ಮೂರು ದಿನಗಳ ಕಾಲ ಮದ್ದೂರಿನಲ್ಲಿ ಅಂಗಡಿ, ಮುಗ್ಗಟ್ಟು ತೆರೆದಿರಲಿಲ್ಲ. ವ್ಯಾಪಾರ-ವಹಿವಾಟು ಸ್ಥಗಿತಗೊಂಡಿತ್ತು. ಇಂದು ಮದ್ದೂರು ಪಟ್ಟಣ ಸಹಜ ಸ್ಥಿತಿಯ ಮರಳಿದೆ. ಅಂಗಡಿಗಳು ತೆರೆದಿದ್ದು, ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಸಾರ್ವಜನಿಕರು ಸಹಜವಾಗಿ ಓಡಾಟ ನಡೆಸಿದ್ದಾರೆ.
TAGGED:ಮದ್ದೂರು
