ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಘಟನೆ ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಹೆದ್ದರೈ ತಡೆದು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಈ ಎಲಾ ಘಟನೆ ಖಂಡಿಸಿ ನಾಳೆ ಮದ್ದೂರು ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿದೆ.
ಮದ್ದೂರಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಲವೆಡೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈನಡುವೆ ಹಿಂದೂಪರ ಸಂಘಟನೆಗಳು ನಾಳೆ ಸ್ವಯಂಪ್ರೇರಿತವಾಗಿ ಮದ್ದೂರು ಬಂದ್ ಗೆ ಕರೆ ನೀಡಿವೆ.
ಮದ್ದೂರಿನಲ್ಲಿ ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಲಾಗಿದ್ದು, ನಾಳೆ ಮದ್ದೂರು ಸಂಪೂರ್ಣ ಸ್ಥಬ್ಧಗೊಳ್ಳುವ ಸಾಧ್ಯತೆ ಇದೆ. ಈ ನಡುವೆ ಕಲ್ಲು ತೂರಾಟ ಪ್ರಕರಣ ಸಂಬಂಧ 21 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಆವೇಜ್, ಮೊಹಮ್ಮದ್ ಇರ್ಫಾನ್, ನವಾಜ್ ಖಾನ್, ಇಮ್ರಾನ್ ಪಾಷಾ, ಉಮರ್ ಫಾರೂಖ್, ಸೈಯದ್ ದಸ್ತಗೀರ್, ಖಾಸಿಫ್ ಅಹ್ಮದ್, ಮುಸವೀರ್ ಪಾಷಾ ಸೇರಿದಂತೆ 21 ಜನರನ್ನು ಬಂಧಿಸಲಾಗಿದೆ.