ಬೆಂಗಳೂರು: ಮದ್ದೂರಿನಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಮಾಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಮಸೀದಿ ಬಳಿ ಮೆರವಣಿಗೆ ಸಾಗುವಾಗ ಕಲ್ಲುತೂರಾಟ ಪ್ರಕರಣ ನಡೆದಿದೆ. ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ಹೇಳಿದರು.
ಮದ್ದೂರುನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಈಗಾಗಲೇ 21 ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿರಲಿ, ಹಿಂದೂ ಆಗಿರಲಿ, ಮುಸ್ಲಿಂ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಜಿಲ್ಲಾ ಉಸ್ತುವಾರಿ ಸಚಿವರು ಮದ್ದೂರಿಗೆ ತೆರಳುತ್ತಿದ್ದಾರೆ. ಉಸ್ತುವಾರಿ ಸಚಿವರು ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.