ಮಂಡ್ಯ: ಮದ್ದೂರಿನಲ್ಲಿ ನಡೆದ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧ ಈಗಾಗಲೇ 32 ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕಲ್ಲು ತೂರಾಟ ನಡೆಸಲು ಮೊದಲೇ ಪ್ಲಾನ್ ಮಾಡಿಕೊಂಡಿದ್ದಾಗಿ ಬಾಯ್ಬಿಟ್ಟಿದ್ದಾರೆ.
ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಲಾಗಿದ್ದ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲು ಪೂರ್ವ ಯೀಜನೆ ರೂಪಿಸಲಾಗಿತ್ತು. ಆದರೆ ಟಾರ್ಗೆಟ್ ಮಾಡಿಕೊಂಡಿದ್ದ ಗಣೇಶ ಮೆರವಣಿಗೆ ಬದಲಾಗಿ ಬೇರೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಬಂಧಿತ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಗಲಭೆ ನಡೆಸಲು ಹುನ್ನಾರ ನಡೆಸಿದ್ದರೆ? ಎಂಬ ಬಗ್ಗೆಯೂ ತನಿಖೆ ನಡೆಸಿದ್ದಾರೆ.