HomeLatest NewsBIG NEWS: ಮದ್ದೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಕಲ್ಲು ತೂರಾಟ: ಪೂರ್ವನಿಯೋಜಿತ ಕೃತ್ಯ: ತನಿಖೆಯಲ್ಲಿ ಬಯಲು

BIG NEWS: ಮದ್ದೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಕಲ್ಲು ತೂರಾಟ: ಪೂರ್ವನಿಯೋಜಿತ ಕೃತ್ಯ: ತನಿಖೆಯಲ್ಲಿ ಬಯಲು

ಮಂಡ್ಯ: ಮದ್ದೂರಿನಲ್ಲಿ ನಡೆದ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧ ಈಗಾಗಲೇ 32 ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕಲ್ಲು ತೂರಾಟ ನಡೆಸಲು ಮೊದಲೇ ಪ್ಲಾನ್ ಮಾಡಿಕೊಂಡಿದ್ದಾಗಿ ಬಾಯ್ಬಿಟ್ಟಿದ್ದಾರೆ.

ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಲಾಗಿದ್ದ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲು ಪೂರ್ವ ಯೀಜನೆ ರೂಪಿಸಲಾಗಿತ್ತು. ಆದರೆ ಟಾರ್ಗೆಟ್ ಮಾಡಿಕೊಂಡಿದ್ದ ಗಣೇಶ ಮೆರವಣಿಗೆ ಬದಲಾಗಿ ಬೇರೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಗಲಭೆ ನಡೆಸಲು ಹುನ್ನಾರ ನಡೆಸಿದ್ದರೆ? ಎಂಬ ಬಗ್ಗೆಯೂ ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular