ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆ ಬಳಿಕ ಪ್ರತಿಭಟನೆ, ಲಾಠಿಚಾರ್ಜ್ ಬೆನ್ನಲ್ಲೇ ಉದ್ವಿಗ್ನಗೊಂಡಿದ್ದ ಮದ್ದೂರು ಕೊಂಚ ತಣ್ಣಗಾಗಿದೆ. ಪೊಲೀಸರ ಮನವೊಲಿಕೆ ಬಳಿಕ ಹಿಂದೂಪರ ಸಂಘಟನಾ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದಿದ್ದಾರೆ.
ಕಲ್ಲು ತೂರಾಟ ನಡೆಸಿದವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. ಕಲ್ಲು ಎಸೆಯಲಾದ ಮಸೀದಿ ಬಾಗಿಲು ಮುಚ್ಚಿಸಬೇಕು. ಪ್ರತಿಭಟನಾ ನಿರತ ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು. ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಹಿಂದೂಪರ ಸಂಘಟನೆಗಳ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಭಾಗವಹಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಹಿಂದೂ ಮುಖಂಡರ ಜೊತೆ ಸಭೆ ನಡೆಸಿ, ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದಿದ್ದಾರೆ. ನಾಳೆ ಮದ್ದೂರು ಬಂದ್ ಗೆ ಕರೆ ನೀಡಿದ್ದಾರೆ.