HomeLatest NewsBREAKING: ಮದ್ದೂರು ಕಲ್ಲು ತೂರಾಟ ಪ್ರಕರಣ: ಶಾಂತಿ ಸಭೆ ಬಹಿಷ್ಕರಿಸಿದ ಹಿಂದೂ ಮುಖಂಡರು

BREAKING: ಮದ್ದೂರು ಕಲ್ಲು ತೂರಾಟ ಪ್ರಕರಣ: ಶಾಂತಿ ಸಭೆ ಬಹಿಷ್ಕರಿಸಿದ ಹಿಂದೂ ಮುಖಂಡರು

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಬೆನ್ನಲ್ಲೇ ಮದ್ದೂರುನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಂತಿ ಸಭೆ ಆರಂಭವಾಗಿದೆ.

ಮದ್ದೂರಿನ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಸಭೆಗೆ ಹಿಂದೂ ಹಾಗೂ ಮುಸ್ಲಿಂ ಮುಖಂಡರನ್ನು ಆಹ್ವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೂ ಮುಖಂಡರು ಸಭೆಗೆ ಗೈರಾಗಿದ್ದಾರೆ ಎನ್ನಲಾಗಿದೆ. ಹಿಂದೂ ಮುಖಂಡರು ಶಾಂತಿ ಸಭೆ ಬಹಿಷ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಹಿಂದೂ ಪರ ಸಂಘಟನೆಗಳು ಇಂದು ಮದ್ದೂರು ಬಂದ್ ಗೆ ಕರೆ ನೀಡಿರುವುದರಿಂದ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧಗೊಂಡಿದೆ. ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular