ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು, ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದರು. ಈ ವೇಳೆ ಪೊಲೀಸರಿಂದ ಲಾಠಿ ಏಟು ತಿಂದ ಮಹಿಳೆಯೊಬ್ಬರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಲಾಠಿ ಏಟು ತಿಂದಿದ್ದ ಮದ್ದೂರಿನ ಶಿವಪುರ ನಿವಾಸಿ ಜ್ಯೋತಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮದ್ದೂರು ಠಾಣೆ ಪಿಐ ಶಿವಕುಮಾರ್ ನೀಡಿದ ದೂರುನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸಿಎಂ ಹಾಗೂ ಮುಸ್ಲಿಂರ ವಿರುದ್ಧ ಅವಹೇಳನಕಾರಿ ಹೇಳಿಕೆ, ಅನ್ಯಧರ್ಮದ ಬಗ್ಗೆ ಧಕ್ಕೆಯಾಗುವಂತೆ ಪದ ಬಳಕೆ, ಕೋಮುಗಳ ನಡುವೆ ವೈಮನಸ್ಸು ಉಂಟುಮಾಡುವ ಹೇಳಿಕೆ, ವೈರತ್ವ ಉತ್ತೇಜನ ನೀಡುವ ಆರೋಪದಡಿ ಕೇಸ್ ದಾಖಲಾಗಿದೆ.