HomeKarnatakaBIG NEWS: ಮದ್ದೂರು ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಸಸ್ಪೆಂಡ್

BIG NEWS: ಮದ್ದೂರು ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಸಸ್ಪೆಂಡ್

ಮಂಡ್ಯ: ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಯೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಪ್ರವೀಣ್ ಅಮಾನತುಗೊಂಡವರು. ಪಾಂಡವಪುರ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾಗ 2018-19ನೇ ಸಾಲಿನ ಎಸ್ ಸಿಪಿ, ಟಿಎಸ್ ಪಿ ಯೋಜನೆಯಡಿಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಅಧೀನ ಕಾರ್ಯದರ್ಶಿ ಮದ್ದೂರು ಪಶು ಆಸ್ಪತ್ರೆ ಮುಖ್ಯವೈದಾಧಿಕಾರಿಯನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular