HomeAgricultureರಾಗಿ, ಭತ್ತಕ್ಕೆ ರೈತ ಹೋರಾಟಗಾರ ಮಾದೇಗೌಡರ ಹೆಸರು

ರಾಗಿ, ಭತ್ತಕ್ಕೆ ರೈತ ಹೋರಾಟಗಾರ ಮಾದೇಗೌಡರ ಹೆಸರು

ಮಂಡ್ಯ: ರಾಗಿ ಅಥವಾ ಭತ್ತದ ತಳಿಗೆ ರೈತ ಹೋರಾಟಗಾರ ದಿ.ಡಾ.ಜಿ. ಮಾದೇಗೌಡರ ಹೆಸರು ಇಡುವಂತೆ ಬೆಂಗಳೂರು ಕೃಷಿ ವಿವಿ ಕುಲಪತಿ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಸೂಚಿಸಿದ್ದಾರೆ.

ಮಂಡ್ಯದಲ್ಲಿ ಆಯೋಜಿಸಿದ್ದ ಡಾ. ಜಿ. ಮಾದೇಗೌಡ ಪ್ರತಿಷ್ಠಾನದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಈ ಬಗ್ಗೆ ಪ್ರಸ್ತಾಪಿಸಿದರು. ಮಾದೇಗೌಡರು 60 ವರ್ಷ ಶೈಕ್ಷಣಿಕ, ರಾಜಕೀಯವಾಗಿ  ಹಲವು ಕೊಡುಗೆ ನೀಡಿದ್ದಾರೆ. ಅವರ ಹೆಸರನ್ನು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿಯ ತಳಿಗೆ ಮಾದೇಗೌಡರ ಹೆಸರನ್ನು ನಾಮಕರಣ ಮಾಡಬೇಕೆಂದು ಕೃಷಿ ಸಚಿವರಿಗೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ಕಾರ್ಯಕ್ರಮದಲ್ಲಿ ಮನವಿಗೆ ಸ್ಪಂದಿಸಿದ ಸಚಿವ ಚೆಲುವರಾಯಸ್ವಾಮಿ, ತುರ್ತಾಗಿ ಈ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು. ಅಂತೆಯೇ ರಾಗಿ ಅಥವಾ ಭತ್ತದ ತಳಿಗೆ ಜಿ. ಮಾದೇಗೌಡರ ಹೆಸರಿಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular