ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಾಮಿಡಿ ಕಿಲಾಡಿಗಳು’, ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಖ್ಯಾತಿಯ ನಟ ಮಡೆನೂರು ಮನುನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಮಡೆನೂರು ಮನುನನ್ನು ಬಂಧಿಸಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಮನುನನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ಪೊಲೀಸರು ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಕೇಳಿದ್ದರು.
ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಮಡೆನೂರು ಮನುನನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಮನುನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.