HomeLatest NewsBIG NEWS: ಮರು ಜಾತಿಗಣತಿ ಸಮೀಕ್ಷೆಗೆ ಶಿಕ್ಷಕರ ಬಳಕೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

BIG NEWS: ಮರು ಜಾತಿಗಣತಿ ಸಮೀಕ್ಷೆಗೆ ಶಿಕ್ಷಕರ ಬಳಕೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲು ಮುಂದಾಗಿರುವ ಶೈಕ್ಷಣಿಕ, ಆರ್ಥಿಕ ಮರು ಸಮೀಕ್ಷೆ( ಜತಿಗಣತಿ)ಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಗಣತಿ ಜವಾಬ್ದಾರಿ ಹೊರಗುತ್ತಿಗೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿದರೆ ವಾರಗಟ್ಟಲೇ ಶಾಲೆಗಳಲ್ಲಿ ಮಕ್ಕಳಿಗೆ ಪಾಠಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ಗಣತಿ ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡುತ್ತಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಜನಾಭಿಪ್ರಾಯದ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿ ಸಮೀಕ್ಷೆಗೆ ಮುಂದಾಗಿದೆ. ಬಿಜೆಪಿ ರಾಜಕೀಯ ಲಾಭದ ಆಶಯಗಳೊಂದಿಗೆ ಈ ಸಮೀಕ್ಷೆ ನಡೆಸಲಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದತ್ತ ಅವಕಾಶಗಳು ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ದೊರಕಲಿ ಎಂಬ ಆಶಯಗಳೊಂದಿಗೆ ಮತ್ತೊಮ್ಮೆ ಜನಗಣತಿಗೆ ಮುಂದಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular