HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷದಿಂದ ಎಲ್ಲರಿಗೂ ಸಿಇಟಿ, ನೀಟ್ ತರಬೇತಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷದಿಂದ ಎಲ್ಲರಿಗೂ ಸಿಇಟಿ, ನೀಟ್ ತರಬೇತಿ

ಶಿವಮೊಗ್ಗ: ಈ ವರ್ಷದಿಂದ ಯಾವುದೇ ಮಿತಿ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ತರಬೇತಿ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳಿಗೆ ಕಳೆದ ವರ್ಷ ಸಿಇಟಿ ನೀಟ್ ತರಬೇತಿ ನೀಡಲಾಗಿತ್ತು. ಈ ವರ್ಷದಿಂದ ಯಾವುದೇ ಮಿತಿ ಇಲ್ಲದೆ ಎಲ್ಲ ವಿದ್ಯಾರ್ಥಿಗಳಿಗೆ ತರಬೇತಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರದ ವತಿಯಿಂದ ನೀಡಿದ ಸಿಇಟಿ ಹಾಗೂ ನೀಟ್ ತರಗತಿ ಬಗ್ಗೆ ವಿದ್ಯಾರ್ಥಿಗಳಿಗೆ ಮೆಚ್ಚುಗೆಯಾಗಿದ್ದು, ಅವರಿಗೆ ಅನುಕೂಲವಾಗಿದೆ. ಸುಮಾರು 16 ಜಿಲ್ಲೆಗಳಲ್ಲಿ ಈ ತರಗತಿ ನಡೆಸಲಾಗಿದ್ದು, ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ಶಾಲೆಗಳ ಗುಣಮಟ್ಟ ವೃದ್ಧಿಗೆ ತಾಲೂಕು ಮಟ್ಟದ ಶೈಕ್ಷಣಿಕ ಸಮಿತಿ ರಚಿಸಲಾಗಿದ್ದು, ಇದರ ಮೇಲ್ವಿಚಾರಣೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೂಡ ನೋಡಿಕೊಳ್ಳುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular