HomeKarnatakaಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಹಕ್ಕುಪತ್ರ ವಿತರಣೆಗೆ ಕ್ರಮ

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಹಕ್ಕುಪತ್ರ ವಿತರಣೆಗೆ ಕ್ರಮ

ಶಿವಮೊಗ್ಗ: ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ ಕಟ್ಟಿಕೊಂಡು ಜೀವನ ನಿರ್ವಹಿಸುತ್ತಿರುವ ಅರ್ಹ ರೈತರಿಗೆ ಮತ್ತು ನಿವಾಸಿಗಳಿಗೆ ಸರ್ಕಾರದಿಂದಲೇ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಸೊರಬದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಈ ಹಿಂದೆ ಸದರಿ ವಿಷಯವು ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಾಧಾರ ಮತ್ತು ದಾಖಲೆಗಳ ಸಹಿತ ಸಮರ್ಥಿಸಿಕೊಳ್ಳುವಲ್ಲಿ ನ್ಯೂನತೆಗಳಿದ್ದುದನ್ನು ಗುರುತಿಸಿ, ಓರ್ವ ಸಮರ್ಥ ನ್ಯಾಯವಾದಿಯೊಬ್ಬರನ್ನು ಈಗಾಗಲೇ ನೇಮಿಸಿದೆ. 2025ರ ಜನವರಿ ಮಾಹೆಯಲ್ಲಿ ಈ ಪ್ರಕರಣ ವಿಚಾರಣೆಗೆ ಬರಲಿದ್ದು, ರಾಜ್ಯದ ಶರಾವತಿ ಸಂತ್ರಸ್ಥರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ತೀರ್ಪು ಹೊರಬರುವ ಆಶಯ ತಮಗಿರುವುದಾಗಿ ಅವರು ತಿಳಿಸಿದರು.

ಹಲವು ದಶಕಗಳ ಸಮಸ್ಯೆಗೆ ಈ ಹಿಂದಿನ ಚುನಾಯಿತ ಜನಪ್ರತಿನಿಧಿಗಳು ಅರ್ಹ ಬಡ ರೈತರಿಗೆ, ವನವಾಸಿಗಳಿಗೆ ಸರಿಯಾದ ನ್ಯಾಯ ಒದಗಿಸುವಲ್ಲಿ ವಿಫುಲರಾಗಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದ ಅವರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಅಧಿಕಾರಾವಧಿಯಲ್ಲಿ ವಿತರಿಸಲಾಗಿದ್ದ ಹಕ್ಕುಪತ್ರಗಳನ್ನು ನಂತರ ಆಡಳಿತಕ್ಕೆ ಬಂದ ಸರ್ಕಾರಗಳು ಸದರಿ ಹಕ್ಕುಪತ್ರಗಳನ್ನು ಅನೂರ್ಜಿತಗೊಳಿಸಿ, ರೈತರನ್ನು ಸಂಕಷ್ಟಕ್ಕೀಡು ಮಾಡಿದ್ದವು. ಪ್ರಸ್ತುತ ಸರ್ಕಾರ ನೊಂದವರ ಪರವಾಗಿ ಕಾರ್ಯನಿರ್ವಹಿಸಲಿದೆ ಎಂದವರು ನುಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಷಯಕ್ಕೆ ಸಂಬಂಧಿಸಿದಂತೆ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಯತ್ನ ಮುಂದುವರೆದಿದ್ದು, ಅರ್ಹರಿಗೆ ಹಕ್ಕುಪತ್ರ ನೀಡುವ ಕುರಿತು ಈಗಾಗಲೇ ಅನೇಕ ಬಾರಿ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ಅಡಿಕೆ ಹಾನಿಕಾರಕವಲ್ಲ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹಾಗೂ ಪರಂಪರಾಗತವಾಗಿ ಅಡಿಕೆ ಬೆಳೆಯನ್ನು ತಮ್ಮ ಜೀವನಾಧಾರ ಬೆಳೆಯನ್ನಾಗಿ ಬೆಳೆಸಿಕೊಂಡು ಬರಲಾಗುತ್ತಿದೆ. ಅಲ್ಲದೇ ಅದರ ಕ್ಷೇತ್ರವ್ಯಾಪ್ತಿ ಪ್ರತಿವರ್ಷ ಹೆಚ್ಚಾಗುತ್ತಲೇ ಇದೆ. ಕೆಲವು ವರ್ಷಗಳ ಹಿಂದೆ ಅಡಿಕೆ ಬೆಳೆ ಆರೋಗ್ಯಕ್ಕೆ ಹಾನಿಕಾರಕವೆಂದು ಸಂಸ್ಥೆಯೊಂದು ವರದಿ ನೀಡಿತ್ತು. ಈ ವರದಿ ಸ್ಪಷ್ಟತೆಯಿಂದ ಕೂಡಿಲ್ಲ. ಬದಲಾಗಿ ಅಡಿಕೆ ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಹಾನಿಕಾರಕವಲ್ಲ ಎಂದ ಅವರು, ರಾಜ್ಯ ಸರ್ಕಾರವು ಅಡಿಕೆ ಬೆಳೆಗಾರರ ಸಂರಕ್ಷಣೆಗೆ ಬದ್ದವಾಗಿದೆ. ಕೇಂದ್ರ ಸರ್ಕಾರವೂ ಕೂಡ ಈ ಬಗ್ಗೆ ರೈತರ ಪರವಾಗಿ ಸಮರ್ಥಿಸಿಕೊಳ್ಳಬೇಕೆಂದವರು ನುಡಿದರು.

ಸದನದಲ್ಲಿ ಅಸಂವಿಧಾನಿಕ ಪದ ಬಳಕೆಗೆ ಖಂಡನೆ: ಮಹಿಳಾ ಸಚಿವರ ಬಗ್ಗೆ ಮಾತನಾಡುವ ಭರದಲ್ಲಿ ಅಸಂವಿಧಾನಿಕ ಪದ ಬಳಸಿರುವುದು ಖಂಡನೀಯ ಮತ್ತು ಅತ್ಯಂತ ಬೇಜವಾಬ್ದಾರಿ ಹೇಳಿಕೆಯಾಗಿದೆ. ಅಸಭ್ಯ ಪದ ಬಳಕೆ ಮಾಡಿದ ಜನಪ್ರತಿನಿಧಿಗಳ ವಿರುದ್ಧ ನ್ಯಾಯಾಲಯವು ಕಠಿಣ ದಂಡನೆಗೆ ಗುರಿಪಡಿಸಬೇಕೆಂದವರು ನುಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular