HomeKarnatakaವಿಧಾನಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ…? ಕುತೂಹಲ ಮೂಡಿಸಿದ ಮಧು ಬಂಗಾರಪ್ಪ ಹೇಳಿಕೆ

ವಿಧಾನಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ…? ಕುತೂಹಲ ಮೂಡಿಸಿದ ಮಧು ಬಂಗಾರಪ್ಪ ಹೇಳಿಕೆ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಟೀಕಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಕೇವಲ ಹಿಂದುತ್ವದಿಂದ ಜನರ ಹೊಟ್ಟೆ ತುಂಬುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತೂ ಭಾವನಾತ್ಮಕವಾಗಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ಶಿವರಾಜ್ ಕುಮಾರ್ ಅವರಿಗೆ ರಾಜಕೀಯ ಕ್ಷೇತ್ರದಲ್ಲಿ ಒಲವಿಲ್ಲ. ಆದರೆ, ಗೀತಕ್ಕ ಚುನಾವಣೆಯಲ್ಲಿ ನನ್ನ ಜೊತೆ ಬಂದೇ ಬರುತ್ತಾರೆ. ನಾನು ಸೊರಬ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಅವರು ಪ್ರಚಾರಕ್ಕೆ ಬರುತ್ತಾರೆ. ಅಕ್ಕ ಗೀತ ಇದುವರೆಗೆ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ. ಕಾದು ನೋಡುತ್ತಿರಿ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular