HomeKarnatakaಸಮಗ್ರ ಶಿಕ್ಷಣದಲ್ಲೂ ಕೇಂದ್ರದಿಂದ ತಾರತಮ್ಯ: ಮಕ್ಕಳಿಗೆ ಅನುದಾನ ಕೊಟ್ಟಿಲ್ಲ: ಮಧು ಬಂಗಾರಪ್ಪ

ಸಮಗ್ರ ಶಿಕ್ಷಣದಲ್ಲೂ ಕೇಂದ್ರದಿಂದ ತಾರತಮ್ಯ: ಮಕ್ಕಳಿಗೆ ಅನುದಾನ ಕೊಟ್ಟಿಲ್ಲ: ಮಧು ಬಂಗಾರಪ್ಪ

ಮೈಸೂರು: ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನ(ಸರ್ವ ಶಿಕ್ಷಣ ಅಭಿಯಾನ)ದಲ್ಲೂ ಕೇಂದ್ರ ಸರ್ಕಾರ ಅನುದಾನದ ತಾರತಮ್ಯ ಮಾಡುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ನೀಡಬೇಕಾದ ಹಣವನ್ನು ಕೂಡ ಕೇಂದ್ರ ಸರ್ಕಾರ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.

ಸರ್ವ ಶಿಕ್ಷಣ ಅಭಿಯಾನದ ಅಡಿಯಲ್ಲಿ ಪ್ರತಿ ಮಗುವಿಗೆ ಸರಾಸರಿ 5500 ರೂಪಾಯಿ ಅನುದಾನ ನೀಡಬೇಕಿತ್ತು. ರಾಜ್ಯಕ್ಕೆ ಅನುಗುಣವಾಗಿ ಶೇಕಡ 10 ರಿಂದ 15 ರಷ್ಟು ವ್ಯತ್ಯಾಸವಾಗುತ್ತದೆ. ಆದರೆ ನಮ್ಮ ರಾಜ್ಯದ ಪ್ರತಿ ಮಗುವಿಗೆ 2400 ರೂ. ಮಾತ್ರ ನೀಡಲಾಗುತ್ತಿದೆ. ಇದರ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದರೂ ಇದುವರೆಗೂ ಭೇಟಿಗೆ ಅವಕಾಶ ನೀಡಿಲ್ಲ. ಹೀಗಾಗಿ ನಮ್ಮ ಪಾಲು ಕೇಳಲು ದೆಹಲಿಯಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular