HomeKarnatakaBIG NEWS: ಶಾಲೆಗಳಲ್ಲಿ ಕೇಸರಿ ಶಾಲು ಹಾಕಿಕೊಂಡು ಬಂದರೆ ಕಾನೂನು ಕ್ರಮ: ಸಚಿವ ಮಧು ಬಂಗಾರಪ್ಪ...

BIG NEWS: ಶಾಲೆಗಳಲ್ಲಿ ಕೇಸರಿ ಶಾಲು ಹಾಕಿಕೊಂಡು ಬಂದರೆ ಕಾನೂನು ಕ್ರಮ: ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

ಮೈಸೂರು: ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ‌. ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಸಮಾನತೆ ಸಂಕೇತ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ, ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್​ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular