BREAKING: ರಾಜ್ಯದಲ್ಲಿ ಏಷಿಯನ್ ಡೆವಲಪ್ ಮೆಂಟ್ ಬ್ಯಾಂಕ್ ನೆರವಿನೊಂದಿಗೆ ಮತ್ತಷ್ಟು ಕೆಪಿಎಸ್ ಶಾಲೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಮಕ್ಕಳಿಗೆ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆ(ಕೆ.ಪಿ.ಎಸ್)ಗಳನ್ನು ಈಗಾಗಲೇ ತೆರೆಯಲಾಗಿದೆ.

ಕೆಪಿಎಸ್ ಶಾಲೆಗಳನ್ನು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನ ನೆರವಿನೊಂದಿಗೆ ವಿಸ್ತರಿಸುವ ಕುರಿತು ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ವಿಧಾನಸೌಧದಲ್ಲಿ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನೆಡೆಸಿದರು.

ಕರ್ನಾಟಕ ಪಬ್ಲಿಕ್ ಶಾಲೆ(ಕೆ.ಪಿ.ಎಸ್) ಗಳಿಂದಾಗಿ ಗ್ರಾಮಿಣ ಭಾಗದ ಮಕ್ಕಳ ಶೈಕ್ಷಣಿಕ ವಿಕಾಸ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸುವುದರ ಜೊತೆಗೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದಂತೆ ಎಚ್ಚರ ವಹಿಸಿಸುವ ಕುರಿತಂತೆ ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ತ್ರಿಲೋಕ ಚಂದ್ರ, ರಾಜ್ಯ ಯೋಜನಾ ನಿರ್ದೇಶಕ ಎಂ. ಕುರ್ಮರಾವ್, ಧಾರವಾಡ ವಿಭಾಗದ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ ಹಾಗೂ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ್ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read