HomeKarnatakaರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ “ಪ್ರಗತಿ ಪರಿಶೀಲನಾ ಸಭೆ” ನಡೆಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರು(ಆಡಳಿತ, ಅಭಿವೃದ್ಧಿ, ಪದವಿ ಪೂರ್ವ) ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲಾ-ಕಾಲೇಜುಗಳ ಸುಧಾರಣೆ ಸೇರಿದಂತೆ ಇನ್ನೂ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು..

ಸಭೆಯಲ್ಲಿ ಚರ್ಚಿಸಲಾದ ವಿಷಯಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ಶಾಲೆಗಳ/ಕಾಲೇಜುಗಳ ಕೊಠಡಿಗಳ ನಿರ್ಮಾಣ,ದುರಸ್ತಿ

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್.ಎಸ್.ಎಲ್.ಸಿ  ಹಾಗೂ ಪಿ.ಯು.ಸಿ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ಕುರಿತು.

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.

ಶಿಕ್ಷಕರ ನೇಮಕಾತಿ ಕುರಿತು.

ಉಚಿತ CET, NEET ಹಾಗೂ JEE ವಿಶೇಷ ಕೋಚಿಂಗ್‌ ತರಬೇತಿ ಪ್ರಗತಿ ವಿವರದ ಕುರಿತು.

2025 ನೇ ಸಾಲಿನ SSLC ಹಾಗೂ PUC ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಸೇರಿದಂತೆ ಶಿಕ್ಷಣ ಇಲಾಖೆಗೆ ಇನ್ನಿತರ ಅನೇಕ ಅಭಿವೃದ್ಧಿ ವಿಚಾರಗಳ ಕುರಿತು ವಿಡಿಯೋ ಸಂವಾದದ ಮೂಲಕ ಚರ್ಚಿಸಲಾಯಿತು.

ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತ ತ್ರಿಲೋಕ ಚಂದ್ರ, ಪದವಿಪೂರ್ವ ನಿರ್ದೇಶಕರಾದ ಸಿಂಧು ಬಿ. ರೂಪೇಶ್, ರಾಜ್ಯ ಯೋಜನಾ ನಿರ್ದೇಶಕ ಎಂ. ಕೂರ್ಮರಾವ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular