HomeKarnatakaBIG NEWS: ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ವಿರುದ್ಧ ಸುಮೋಟೋ ಕೇಸ್...

BIG NEWS: ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ವಿರುದ್ಧ ಸುಮೋಟೋ ಕೇಸ್ ದಾಖಲು

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ವಿನೋಬಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ ಸ್ಟಾ ಗ್ರಾಮ್ ನಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮೋಹಿತ್ ನರಸಿಂಹ ಮೂರ್ತಿ ಎಂಬಾತನ ವಿರುದ್ಧ ವಿನೋಬಾನಗರ ಠಾಣೆಯಲ್ಲಿ ಸುಮೋಟೋ ದೂರು ನೀಡಲಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ನಿಮ್ಮಪ್ಪನ ಮನೆ ದುದ್ದಲ್ಲಿ ಏನಾದರೂ ಮಕ್ಕಳಿಗೆ ಶಿಕ್ಷಣ ಕೊಡ್ತಾರಾ? ನೀನಿ ಐಷಾರಾಮಿ ಜೀವನ ನಡೆಸುತ್ತಿರುವುದು ಸಾರ್ವಜನಿಕರ ದುಡ್ಡು ಲೂಟಿ ಮಾಡಿ ಅನ್ನೋದು ಸಾಮಾನ್ಯ ಪರಿಜ್ಞಾನ ಇರಲಿ. ಸಾರ್ವಜನಿಕರ ದುಡ್ಡಲ್ಲಿ ದರ್ಪ ಮಾಡುತ್ತಿಯೇನೋ. ನಿಮ್ಮಪ್ಪನ ಮನೆಯಿಂದ ದುಡ್ದು ತಂದು ಸಾರ್ವಜನಿಕರ ಸೇವೆ ಮಾಡುತ್ತಿದ್ದೀಯಾ ಎಂದೆಲ್ಲ ಸುದೀರ್ಗ ಪೋಸ್ಟ್ ಹಾಕಿದ್ದ. ಅಲ್ಲದೇ ಅವಾಚ್ಯ ಶಬ್ದಗಳಿಂದಲೂ ನಿಂದಿಸಿದ್ದ. ಇದೇ ಕಾರಣಕ್ಕೆ ಮೋಹಿತ್ ನರಸಿಂಹ ಮೂರ್ತಿ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular