ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿ ಸುದ್ದಿ: ಒಪಿಎಸ್ ಜಾರಿ, ಅನುದಾನಿತ ಸಂಸ್ಥೆಗಳಲ್ಲಿ ಖಾಲಿ ಹುದ್ದೆ ಭರ್ತಿ; ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ರಾಜ್ಯ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಭಾನುವಾರ ಶಿವಮೊಗ್ಗದ ಪೇಸ್ ಕಾಲೇಜು ಆವರಣದಲ್ಲಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ಹಳೆಯ ಪಿಂಚಣಿ ಜಾರಿಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ ಎಲ್ಲ ಮಕ್ಕಳಿಗೂ ಸಮವಸ್ತ್ರ ನೀಡುವ ಭರವಸೆಯಿಂದ ನಾವು ಹಿಂದೆ ಸರಿಯುವುದಿಲ್ಲ. 2023ರ ವರೆಗೆ ಅನುದಾನಿತ ಸಂಸ್ಥೆಗಳಲ್ಲಿ ಖಾಲಿಯಾದ ಎಲ್ಲಾ ಹುದ್ದೆಗಳ ಜೊತೆಗೆ ಸಂಗೀತ, ದೈಹಿಕ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಹಳೆ ಪಿಂಚಣಿ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read