HomeKarnatakaಭ್ರಷ್ಟಾಚಾರ ರ್ಯಾಂಕಿಂಗ್ ನಲ್ಲಿ ವಿಜಯೇಂದ್ರ ನಂಬರ್.1 ಸ್ಥಾನದಲ್ಲಿದ್ದಾರೆ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಭ್ರಷ್ಟಾಚಾರ ರ್ಯಾಂಕಿಂಗ್ ನಲ್ಲಿ ವಿಜಯೇಂದ್ರ ನಂಬರ್.1 ಸ್ಥಾನದಲ್ಲಿದ್ದಾರೆ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷರೇ ಭ್ರಷ್ಟಾಚಾರದಲ್ಲಿ ನಂಬರ್ 1 ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಭ್ರಷ್ಟಾಚಾರದ ರ್ಯಾಂಕಿಂಗ್ ನಲ್ಲಿ ಬಿ.ವೈ.ವಿಜಯೇಂದ್ರ ನಂಬರ್ 1 ಸ್ಥಾನದಲ್ಲಿದ್ದಾರೆ. ಹಿಂದುಳಿದ ವರ್ಗದ ನಾಯಕನನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ವಿಜಯೇಂದ್ರ ಬಗ್ಗೆ ಸ್ವಪಕ್ಷದ ಶಾಸಕ ಯತ್ನಾಳ್ ಹಿಗ್ಗಾ ಮುಗ್ಗಾ ಬೈಯ್ಯುತ್ತಿದ್ದಾರೆ. ಅದರ ಬಗ್ಗೆ ಅವರಿಗೆ ನಾಚಿಕೆ ಇಲ್ವಾ? ಈಗ ಸರ್ಕಾರದ ವಿರುದ್ಧ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಸರ್ಕಾರದ ವಿರುದ್ಧ ಅಲ್ಲ. ಒಂದು ರೀತಿಯಲ್ಲಿ ವಿಜಯೇಂದ್ರ ತಮ್ಮ ವಿರುದ್ಧವೇ ಪಾದಯಾತ್ರೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular