HomeKarnatakaಡಿ.ಕೆ.ಶಿವಕುಮಾರ್ ರಿಂದ 100 ಕೋಟಿ ಆಫರ್; ದೇವರಾಜೇಗೌಡ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಡಿ.ಕೆ.ಶಿವಕುಮಾರ್ ರಿಂದ 100 ಕೋಟಿ ಆಫರ್; ದೇವರಾಜೇಗೌಡ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಚಿಕ್ಕಮಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ 100ಕೋಟಿ ಆಫರ್ ನೀಡಿದ್ದರು ಎಂಬ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿಕೆಗೆ ಕಿಡಿಕಾರಿರುವ ಸಚಿವ ಮಧು ಬಂಗಾರಪ್ಪ, ಇಂಥಹ ಹೇಳಿಕೆ ಕೊಡುತ್ತಿರುವ ದೇವರಾಜೇಗೌಡ ಯಾವ ಸ್ಥಿತಿಯಲ್ಲಿದ್ದಾರೆ? ಮೊದಲು ಅದನ್ನು ಅರ್ಥಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಾನೂನಿಗಿಂತ ಮಿಗಿಲಾದವರು ಯಾರೂ ಇಲ್ಲ. ವ್ಯಕ್ತಿ ಯಾರೇ ಆಗಿರಲಿ ಅವರಿಂದ ತಪ್ಪಾಗಿದ್ದರೆ ಕಾನೂನು ಖಂಡಿತವಾಗಿಯೂ ಕ್ರಮ ಕೈಗೊಳ್ಳಲಿದೆ. ಅಸಲಿಗೆ ನಡೆಯುತ್ತಿರುವ ಸಂಗತಿ ಎಂದರೆ ಮುಖ್ಯ ವಿಷಯದಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದರು.

ಪ್ರಕರಣದ ಸಂತ್ರಸ್ತೆಯರ ಬಗ್ಗೆ ಯಾರೂ ಯೋಚಿಸುತ್ತಿಲ್ಲ. ಅವರಿಗೆ ನ್ಯಾಯ ಕೊಡಿಸುವ ಕೆಲಸ ಮೊದಲು ಮಾಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular