HomeKarnatakaಎಲ್ಲಾ ಶಾಲೆಗಳಲ್ಲೂ LKG, UKG: ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ: 5 ಸಾವಿರ ಶಿಕ್ಷಕರ...

ಎಲ್ಲಾ ಶಾಲೆಗಳಲ್ಲೂ LKG, UKG: ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ: 5 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗುವುದು. ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ ಕಲ್ಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಿ.ಎಸ್.ಆರ್. ಕಾಂಕ್ಲೇವ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಲ್ಯಾಣ ಕರ್ನಾಟಕದ 1000 ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು. ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ ಸಿಎಸ್ಆರ್ ನಿಧಿ ಬಳಕೆ ಮಾಡಿಕೊಂಡು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಒಂದರಿಂದ ಹನ್ನೆರಡನೇ ತರಗತಿವರೆಗೆ 56 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. 45,000 ಅತಿಥಿ ಶಿಕ್ಷಕರ ಬಳಕೆ ಮಾಡಿಕೊಳ್ಳಲಾಗಿದೆ, 1200 ಶಿಕ್ಷಕರ ನೇಮಕಾತಿಯಾಗುತ್ತಿದ್ದು, 5000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸದ್ಯದಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular