HomeKarnatakaBIG NEWS: ರಾಜ್ಯದಲ್ಲಿ ಖಾಲಿ ಇರುವ 40 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ

BIG NEWS: ರಾಜ್ಯದಲ್ಲಿ ಖಾಲಿ ಇರುವ 40 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 40,000 ಶಿಕ್ಷಕರ ಹುದ್ದೆ ಖಾಲಿ ಇದ್ದು, ಮುಂದಿನ ವರ್ಷದೊಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಾಗರ ತಾಲೂಕು ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ಪೂಜೆ ಸಲ್ಲಿಸಿದ ಸಚಿವರು ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದು ವರ್ಷದೊಳಗೆ 20,000 ಶಿಕ್ಷಕರ ನೇಮಕ ಮಾಡಿಕೊಳ್ಳುವ ಚಿಂತನೆ ಇದೆ. ಶಿಕ್ಷಕರಿಗೆ ಇನ್ಫೋಸಿಸ್, ವಿಪ್ರೋ, ದೇಶಪಾಂಡೆ ಫೌಂಡೇಶನ್ ಸೇರಿದಂತೆ ಖಾಸಗಿ ಸಂಸ್ಥೆಗಳ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಶಾಲೆಗಳ ಅಭಿವೃದ್ಧಿ, ಕೆಪಿಎಸ್ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಗದರ್ಶನದಲ್ಲಿ ಶಿಕ್ಷಣ ಇಲಾಖೆಯಲ್ಲಿ ಹಲವು ಸುಧಾರಣೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular