HomeKarnatakaಶುಭ ಸುದ್ದಿ: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 58,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ

ಶುಭ ಸುದ್ದಿ: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 58,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಾವಂತ ಶಿಕ್ಷಕರು ಶಿಕ್ಷಣ ಇಲಾಖೆಯ ಶಕ್ತಿಯಾಗಿದ್ದು, ಅತಿಥಿ ಶಿಕ್ಷಕರನ್ನು ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದು ತಾತ್ಕಾಲಿಕ ಪರಿಹಾರವಷ್ಟೇ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಂತ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಸರ್ಕಾರದ ಅವಧಿಯಲ್ಲಿ 13,351 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಕೆಲವರು ಕೋರ್ಟ್ ಮೊರೆ ಹೋಗಿದ್ದರಿಂದ ಸ್ಥಳ ನಿಯೋಜನೆ ಆದೇಶ ವಿಳಂಬವಾಗಿದೆ. ಹೀಗಾಗಿ ಕಾನೂನು ನೆರವು ಪಡೆದು ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular