HomeKarnatakaರಾಜ್ಯದಲ್ಲಿ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜಾರಿ, ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ...

ರಾಜ್ಯದಲ್ಲಿ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜಾರಿ, ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಶಾಲಾ ಶಿಕ್ಷಕರ ವಸ್ತ್ರ ಸಂಹಿತೆ ಕುರಿತಾಗಿ ನಿಯಮಗಳು ಇಲ್ಲ. ವಸ್ತ್ರ ಸಂಹಿತೆ ಜಾರಿ ಮಾಡುವಂತಹ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ವಸ್ತ್ರ ಸಂಹಿತೆ ಒಳ್ಳೆಯದು ಎನ್ನುವುದಾದರೆ ಎಲ್ಲರೊಂದಿಗೆ ವಿಸ್ತೃತ ಚರ್ಚೆ ನಡೆಸಿದ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಕುರಿತಾಗಿ ಅವಸರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋರ್ಟ್ ತಡೆ ಇರುವುದರಿಂದ 13,500 ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲು ಸಾಧ್ಯವಿಲ್ಲ. ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರವೇ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. 900ಕ್ಕೂ ಹೆಚ್ಚು ವಿಶೇಷ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 3794 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular