HomeKarnatakaಪ್ರತಿಭಟನಾನಿರತ ಶಿಕ್ಷಕರ ಭೇಟಿಯಾದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

ಪ್ರತಿಭಟನಾನಿರತ ಶಿಕ್ಷಕರ ಭೇಟಿಯಾದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ  ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಮಸ್ಯೆಗಳನ್ನು ಹಾಗೂ ವಿವಿಧ ಬೇಡಿಕೆಗಳನ್ನು ಆಲಿಸಿ ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದರು.

ಈಗಾಗಲೇ ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನೌಕರರಿಗೆ 7ನೇ ವೇತನ ಜಾರಿಮಾಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸುವಲ್ಲಿ ಚಿಂತನೆ ನಡೆಸುತ್ತಿದೆ. ಕೆಲವು ಕಾನೂನಾತ್ಮಕ ಅಡೆತಡೆಗಳು ಎದುರಾಗಿರುವುದರಿಂದ ತಡವಾಗುತ್ತಿದ್ದು, ಸಮಸ್ಯೆಯ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಶೀಘ್ರವಾಗಿ ಚರ್ಚಿಸಿ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ಸಿ.ಟಿ. ರವಿ, ಶಿಕ್ಷಣ ತಜ್ಞ ವಿ.ಪಿ ನಿರಂಜನಾರಾಧ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಸೇರಿದಂತೆ ಸಂಘದ ಪದಾಧಿಕಾರಿಗಳುˌ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಶಿಕ್ಷಕರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular