HomeKarnatakaಜ. 17ರೊಳಗೆ ಪಠ್ಯಪುಸ್ತಕ ಪರಿಷ್ಕರಣೆ ವರದಿ ಸಲ್ಲಿಕೆಗೆ ಸೂಚನೆ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಮುದ್ರಣ...

ಜ. 17ರೊಳಗೆ ಪಠ್ಯಪುಸ್ತಕ ಪರಿಷ್ಕರಣೆ ವರದಿ ಸಲ್ಲಿಕೆಗೆ ಸೂಚನೆ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಮುದ್ರಣ ಶೀಘ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಮಾಡಿದ್ದ ಬದಲಾವಣೆ ಪರಿಷ್ಕರಿಸಲು ರಚಿಸಿರುವ ಪ್ರೊ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿ ಜನವರಿ 17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಇಲಾಖೆಯ ಅಧಿಕಾರಿಯೊಂದಿಗೆ ಸಭೆ ನಡೆಸಿದ ಸಚಿವರು, ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಸಿದ್ಧತೆ, ಪುಸ್ತಕ ಪರಿಷ್ಕರಣೆ ಕುರಿತು ಚರ್ಚೆ ನಡೆಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಪುಸ್ತಕಗಳ ಮುದ್ರಣ ಕಾರ್ಯಾ ಆರಂಭಿಸಬೇಕಿರುವುದರಿಂದ ಆದಷ್ಟು ಬೇಗ ಶಾಲಾ ಪಠ್ಯಪರಿಷ್ಕರಣಾ ಸಮಿತಿ ವರದಿ ನೀಡಬೇಕು. ಜನವರಿ 17 ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ ಸೂಚನೆ ನೀಡಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular