ಪಠ್ಯದಲ್ಲಿ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವನ ಚರಿತ್ರೆ ಸೇರ್ಪಡೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲೆ ಪಠ್ಯದಲ್ಲಿ ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನ ಚರಿತ್ರೆ ಕುರಿತ ಪಠ್ಯ ಸೇರ್ಪಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ್ ಅವರ ಪ್ರಸ್ತಾವನೆಗೆ ಉತ್ತರ ನೀಡಿದ ಸಚಿವರು, ಪ್ರಸಕ್ತ ಸಾಲಿನ ಪಠ್ಯಗಳು ವಿದ್ಯಾರ್ಥಿಗಳಿಗೆ ಹಂಚಿಕೆಯಾಗಿದ್ದು, ಈ ವರ್ಷ ಯಾವುದೇ ಹೊಸ ಪಠ್ಯ ಸೇರ್ಪಡೆಗೆ ಅವಕಾಶವಿಲ್ಲ. 2024 -25ನೇ ಶೈಕ್ಷಣಿಕ ವರ್ಷದಿಂದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಜೀವನ ಚರಿತ್ರೆ ಕುರಿತ ಪಠ್ಯ ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗುವುದು. ಸಿದ್ದೇಶ್ವರ ಸ್ವಾಮೀಜಿಯವರ ಪಠ್ಯ ಸೇರ್ಪಡೆ ಕುರಿತಂತೆ ಪಠ್ಯ ಪರಿಷ್ಕರಣೆ ಸಮಿತಿಗೆ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read