HomeKarnatakaರಾಜ್ಯದ ಶಿಕ್ಷಣದ ಇತಿಹಾಸದಲ್ಲೇ ಈ ಬಾರಿ ಕೌನ್ಸೆಲಿಂಗ್ ಮೂಲಕ 25,000 ಶಿಕ್ಷಕರ ವರ್ಗಾವಣೆ

ರಾಜ್ಯದ ಶಿಕ್ಷಣದ ಇತಿಹಾಸದಲ್ಲೇ ಈ ಬಾರಿ ಕೌನ್ಸೆಲಿಂಗ್ ಮೂಲಕ 25,000 ಶಿಕ್ಷಕರ ವರ್ಗಾವಣೆ

ಮಂಗಳೂರು: ರಾಜ್ಯದ ಶಿಕ್ಷಣದ ಇತಿಹಾಸದಲ್ಲಿಯೇ ಈ ಬಾರಿ 25,000 ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮೂಲಕ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 25 ಸಾವಿರ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮೂಲಕ ನಡೆಯುತ್ತಿದ್ದು, ಜುಲೈ 31ಕ್ಕೆ ಪೂರ್ಣವಾಗಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

13500 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ಮಾಡುತ್ತೇವೆ. ನೇಮಕಾತಿ ವಿಚಾರ ಕೋರ್ಟ್ ನಲ್ಲಿರುವುದರಿಂದ ಈಪ್ರಕ್ರಿಯೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 50,000 ಶಿಕ್ಷಕರ ಕೊರತೆ ಇದ್ದು, ಈಗಾಗಲೇ 33,000 ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ವರ್ಗಾವಣೆಯ ನಂತರ ಖಾಲಿ ಉಳಿದ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿ ಈ ಬಾರಿ ಕಾರ್ಯನಿರ್ವಹಿಸುಲಾಗುವುದು. ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡರೆ ಶಿಕ್ಷಕರ ಕೊರತೆ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular