HomeKarnatakaBIG NEWS: ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಮಧು ಬಂಗಾರಪ್ಪ

BIG NEWS: ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲೆಗೆ ಬಂದು ಮಕ್ಕಳಿಗೆ ಪಾಠ ಮಾಡುವುದನ್ನು ಬಿಟ್ಟು ಶಾಲೆಗೆ ಚಕ್ಕರ್ ಹಾಕಿ ಬೇರೆ ಬೇರೆ ಕೆಲಸದಲ್ಲಿ ತೊಡಗುವ ಶಿಕ್ಷಕರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರಾದವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಬೇಕು. ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ಶಿಕ್ಷಕರು ತಮ್ಮ ಬೇಡಿಕೆ ಈಡೇರಿಸಲು ಪ್ರತಿಭಟನೆ ಮಾಡಿದರೆ ತಪ್ಪಲ್ಲ. ಪ್ರತಿಭಟನೆ ಮಾಡುವ ಹಕ್ಕು ಇದೆ. ಹಾಗಂತ ಬೇರೆ ಬೇರೆ ಕಾರಣಗಳಿಂದ ಶಾಲೆಗಳಿಗೆ ರಜೆ ಹಾಕಿ ಮಕ್ಕಳಿಗೆ ತೊಂದರೆಯಾಗುವಂತೆ ಮಾಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular