HomeKarnatakaಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹಿಸಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ

ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹಿಸಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ

ಶಿಕಾರಿಪುರ: 1995ರ ನಂತರದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಿಕಾರಿಪುರದ ಶಿಕ್ಷಕರೊಬ್ಬರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಶಿಕ್ಷಕ ಪ್ರಶಾಂತ್ ಸಿರಿಂಜ್ ಮೂಲಕ ತಮ್ಮ ರಕ್ತವನ್ನು ತೆಗೆದುಕೊಂಡು ಪತ್ರ ಬರೆದಿದ್ದಾರೆ. ಕನ್ನಡ ಶಾಲೆಗಳಿಗೆ ಅನುದಾನ ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಅನುದಾನ ಸಮಸ್ಯೆಗೆ ಕಾರಣವೇನು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1995ರ ನಂತರ ಆರಂಭವಾಗಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ರಾಜ್ಯ ಸರ್ಕಾರ ಅನುದಾನ ನಿಲ್ಲಿಸಿದೆ. ಈ ಕುರಿತು ಕನ್ನಡ ಮಾದ್ಯಮ ಶಾಲೆಗಳ ಶಿಕ್ಷಕರು ಬೆಂಗಳೂರಿನಲ್ಲಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಆ ಸಂದರ್ಭ ಕನ್ನಡ ಶಾಲೆಗಳಿಗೆ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ಶಿಕ್ಷಕರು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ಶಿಕ್ಷಕರಿಂದ ನೆತ್ತರ ಪತ್ರ

ಮೊದಲು ತಾನು ಸ್ವತಃ ತನ್ನ ರಕ್ತದಿಂದ ಪತ್ರ ಬರೆಯುತ್ತಿರುವುದಾಗಿ ತಿಳಿಸಿರುವ ಶಿಕ್ಷಕ ಪ್ರಶಾಂತ್, ಬೇಡಿಕೆ ಈಡೇರದಿದ್ದರೆ ನವೆಂಬರ್ 1 ರಂದು ಕನ್ನಡ ಶಾಲೆಗಳ ಉಳಿದ ಶಿಕ್ಷಕರು ಸಹ ತಮ್ಮ ರಕ್ತದಿಂದಲೇ ಪತ್ರ ಬರೆಯಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನ ರಕ್ತದಲ್ಲೇ ಕನ್ನಡವಿದೆ ಎಂದು ಸಚಿವ ಮಧು ಬಂಗಾರಪ್ಪ ಈ ಹಿಂದ ಹೇಳಿದ್ದರು. ಇದೇ ಕಾರಣಕ್ಕೆ ಅವರಿಗೆ ರಕ್ತದಲ್ಲಿ ಪತ್ರ ಬರೆಯುತ್ತಿದ್ದೇನೆ. ಸದ್ಯದ ಸ್ಥಿತಿಯಲ್ಲಿ ಅನುದಾನವಿಲ್ಲದೆ ಕನ್ನಡ ಶಾಲೆಗಳಿಗೆ ರಕ್ತವೆ ಇಲ್ಲದಂತಾಗಿದೆ ಎಂದು ಪ್ರಶಾಂತ್ ತಿಳಿಸಿದ್ದಾರೆ.

ಸೂಕ್ಷ್ಮ ನೀರಾವರಿಗೆ ಸಹಾಯಧನ: ಅರ್ಹ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ: 2026-27 ನೇ ಸಾಲಿನ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ’ಯಡಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ, ‘ಪ್ರತಿ ಹನಿಗೆ ಅಧಿಕ ಬೆಳೆ’ ಕಾರ್ಯಕ್ರಮದ ಮೂಲಕ ಹನಿ ಹಾಗೂ ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದೆ.

ಸಹಾಯಧನದ ವಿವರ: 5ಎಕರೆವರೆಗಿನ ಪ್ರದೇಶಕ್ಕೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಪಟ್ಟ ಪ್ರದೇಶಕ್ಕೆ ಶೇಕಡಾ 45 ರ ದರದಲ್ಲಿ ಗರಿಷ್ಠ12.50 ಎಕರೆ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು.

 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಲ್ಲಾ ವರ್ಗಗಳ ಆಸಕ್ತ ರೈತರು ಈ ಸೌಲಭ್ಯವನ್ನು ಪಡೆಯಬಹುದು.

ಮರು ಅಳವಡಿಕೆಗೆ ಅವಕಾಶ: ಈಗಾಗಲೇ 7 ವರ್ಷಗಳ ಹಿಂದೆ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯಧನ ಪಡೆದಿದ್ದು, ಪ್ರಸ್ತುತ ಉಪಕರಣಗಳು ಹಾಳಾಗಿದ್ದರೆ ಅಂತಹ ರೈತರು ಸಹ ಪುನಃ ಸಹಾಯಧನ ಪಡೆಯಲು ಅರ್ಹರಿರುತ್ತಾರೆ.

ಸಹಾಯಧನವನ್ನು ಯೋಜನೆಯ ಮಾರ್ಗಸೂಚಿ, ಅನುದಾನದ ಲಭ್ಯತೆ ಹಾಗೂ ಜೇಷ್ಠತೆಯ ಆಧಾರದ ಮೇಲೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ ಅಥವಾ ತಾಲೂಕು ಮಟ್ಟದ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಬಹುದೆಂದು‌ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular