HomeKarnatakaಗೌಡರ ಕುಟುಂಬದಲ್ಲಿ ಎಲ್ಲರೂ ದೋಚಲು ಶುರು ಮಾಡಿದ್ದಾರೆ: ಹೆಚ್.ಡಿ.ಕೆ. ವಿರುದ್ಧ ಏಕವಚನದಲ್ಲೇ ಹರಿಹಾಯ್ದ ಮಾಧುಸ್ವಾಮಿ

ಗೌಡರ ಕುಟುಂಬದಲ್ಲಿ ಎಲ್ಲರೂ ದೋಚಲು ಶುರು ಮಾಡಿದ್ದಾರೆ: ಹೆಚ್.ಡಿ.ಕೆ. ವಿರುದ್ಧ ಏಕವಚನದಲ್ಲೇ ಹರಿಹಾಯ್ದ ಮಾಧುಸ್ವಾಮಿ

ತುಮಕೂರು: ಗೌಡರ ಕುಟುಂಬದಲ್ಲಿ ಎಲ್ಲರೂ ದೋಚಲು ಶುರು ಮಾಡಿದ್ದಾರೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಮತ್ತಿಘಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಮಾತನಾಡಿದ ಮಾಧುಸ್ವಾಮಿ, ಅಪ್ಪ. ಮಕ್ಕಳು. ಮೊಮ್ಮಕ್ಕಳು. ಪತ್ನಿಯರು ಸೇರಿ ಎಲ್ಲರೂ ದೋಚಲು ಶುರು ಮಾಡಿದ್ದಾರೆ ಎಂದು ಹೆಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕನಾಯಕನಹಳ್ಳಿ ತಾಲೂಕು ಅಭಿವೃದ್ಧಿ ಕಂಡಿಲ್ಲ, ಮಾಧುಸ್ವಾಮಿ ಮಾತ್ರ ಅಭಿವೃದ್ಧಿಯಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅವರ ಅಪ್ಪನನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸೋಕೆ ಬಾರದವನು ಈಗ ನಮ್ಮ ಕ್ಷೇತ್ರಕ್ಕೆ ಬಂದು ಭಾಷಣ ಮಾಡುತ್ತಿದ್ದಾನೆ ಎಂದು ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಹರಿಹಾಯ್ದಿದ್ದಾರೆ.

ಇವರಪ್ಪನಿಗೆ 50 ರೂ. ಕೊಟ್ಟು ಐನೋರು ಕಾಂಟ್ರಾಕ್ಟ್ ಶುರು ಮಾಡಿಸಿದ್ದರು. ನನಗೆ ಅಂತಹ ಸ್ಥಿತಿ ಬಂದಿಲ್ಲ. ಇವರಂತೆ ದೋಚಿ ಬಾಚಿ ನಾನು ಬದುಕುವುದಿಲ್ಲ ಎಂದು ಹೇಳಿದ್ದಾರೆ.

ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬನ್ನಿ ಎಂದು ಸಿದ್ದರಾಮಯ್ಯನವರನ್ನು ಕರೆದಿದ್ದೆ. ಚುನಾವಣೆಯಲ್ಲಿ ಅವರೆದುರು ಸ್ಪರ್ಧಿಸುವುದಕ್ಕೂ ಗೌರವ ಇರುತ್ತದೆ. ನಮ್ಮ ಕ್ಷೇತ್ರದಲ್ಲಿ ನಾನು ಯಾರೊಂದಿಗೆ ಹೋರಾಟ ಮಾಡುತ್ತಿದ್ದೇನೆ ಎನ್ನುವುದೇ ಗೊತ್ತಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular