ಭೋಪಾಲ್: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಪಿಪ್ಲೋಧಿಜಾದ್‌ನಲ್ಲಿ ಭಾನುವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿಯೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.
ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ಅವರು ಘಟನೆಯ ಕುರಿತು ಮಾಹಿತಿ ನೀಡಿದ್ದು, ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ, ಆದರೆ ತಲೆ ಮತ್ತು ಎದೆಗೆ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಭೋಪಾಲ್‌ಗೆ ವರ್ಗಾಯಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರು ವ್ಯಕ್ತಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಸ್ಥಳೀಯ ನಿವಾಸಿಗಳ ಪ್ರಕಾರ, ಮೃತರು ನೆರೆಯ ರಾಜಸ್ಥಾನದಿಂದ ಮದುವೆಗೆ ಬಂದಿದ್ದರು ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ರಾಷ್ಟ್ರಪತಿ ಸಂತಾಪ:
ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಅನೇಕ ಜನರ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.
#WATCH | Rajgarh Accident | Madhya Pradesh: Harsh Dikshit, DM Rajgarh says, "Some people from Rajasthan were coming to the state to attend a wedding, in a tractor. Near the Rajasthan-Rajgarh border, the tractor was overturned in which 13 people died and 15 were injured. Two… pic.twitter.com/9uBKPSHDZ5
— ANI (@ANI) June 2, 2024
Rajgarh Accident | President of India tweets, "The news of the death of many people in a road accident in Rajgarh district of Madhya Pradesh is very sad. I express my deepest condolences to the families who lost their loved ones and pray for the speedy recovery of the injured." pic.twitter.com/f5qwZ7sHPi
— ANI (@ANI) June 2, 2024