58 ವರ್ಷದ ಮಹಿಳೆ ರೇಪ್ ಮಾಡಿ ಭೀಕರವಾಗಿ ಕೊಲೆ ಮಾಡಿದ 16ರ ಬಾಲಕ; ಸೇಡು ತೀರಿಸಿಕೊಳ್ಳಲು ಬರ್ಬರ ಕೃತ್ಯ

16 ವರ್ಷದ ಬಾಲಕ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯ ಬಾಯಿಯನ್ನು ಕಟ್ಟಿ ಅಮಾನುಷವಾಗಿ ಹೊಡೆದು ಕೊಲೆ ಮಾಡಿದ್ದಾನೆ. ಇದು ಎರಡು ವರ್ಷಗಳ ಹಿಂದೆ ಮೊಬೈಲ್ ಫೋನ್ ಕಳ್ಳತನದ ಪರಿಣಾಮವಾಗಿ ನಡೆದಿರುವ ಘಟನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30 ರಂದು ರಾತ್ರಿ ಈ ಘಟನೆ ನಡೆದಿದೆ. ಬಾಲಕ ಆಕೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಮತ್ತು ಬಟ್ಟೆಯನ್ನು ತುಂಬಿ, ಆಕೆ ವಾಸವಿದ್ದ ಕಟ್ಟಡದ ನಿರ್ಮಾಣ ಹಂತದ ಭಾಗಕ್ಕೆ ಎಳೆದೊಯ್ದು, ಆಕೆಯ ತಲೆ ಮತ್ತು ದೇಹದ ಇತರ ಭಾಗಗಳಿಗೆ ಕುಡಗೋಲಿನಿಂದ ಹೊಡೆದು ಆಕೆಯ ಖಾಸಗಿ ಭಾಗಗಳಿಗೆ ಗಾಯಗೊಳಿಸಿದ್ದಾನೆ.

ಎರಡು ವರ್ಷಗಳ ಹಿಂದೆ ಬಾಲಕ ಮೊಬೈಲ್ ಫೋನ್ ಕದ್ದಿದ್ದಾನೆ ಎಂದು ಮಹಿಳೆಯ ಮನೆಯವರು ಆರೋಪಿಸಿದ್ದರು. ಹುಡುಗ ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಬಯಸಿದ್ದನು ಎಂದು ಪೊಲೀಸರು ಶಂಕಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read