50 ಸಾವಿರಕ್ಕೆ ಹುಡುಗಿ ಮಾರಾಟ: ಮಾನವ ಕಳ್ಳ ಸಾಗಣೆ ಪ್ರಕರಣದಲ್ಲಿ ಮಹಿಳೆ ಸೇರಿ ನಾಲ್ವರು ಅರೆಸ್ಟ್

ರೈಸನ್: ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯನ್ನು 50,000 ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಮೂವರು ಪುರುಷರು ಮತ್ತು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಲಾ ಜಿಲ್ಲೆಯ ಘುಘ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ, ಜಬಲ್‌ಪುರದ ಡೈರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರು ಆರೋಪಿಗಳಾದ ಪಹಲ್ವತಿ ಬಾಯಿ ಮತ್ತು ಸುನಿಲ್ ಕುಶ್ವಾಹ ಅವರನ್ನು ಭೇಟಿಯಾಗಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮೃತ್ ಮೀನಾ ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ಆಕೆಗೆ ಮುಂಬೈನಲ್ಲಿ ಉತ್ತಮ ಕೆಲಸ ಕೊಡಿಸುವ ನೆಪದಲ್ಲಿ ಆಮಿಷವೊಡ್ಡಿದ್ದರು. ನಂತರ, ಆರೋಪಿಗಳು ರೈಸನ್‌ ನ ಪಟಾಯಿ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಅವರು ಬಾಲಕಿಯನ್ನು 50,000 ರೂ.ಗೆ ಗೆ ವಿಷ್ಣು ಕುಶ್ವಾಹ ಎಂಬ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ.

ಈ ಮಧ್ಯೆ, ಬಾಲಕಿಯ ಪೋಷಕರು ಮಾಂಡ್ಲಾ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾರೆ. ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಅಧಿಕಾರಿ ಭಾನುವಾರ ತಿಳಿಸಿದ್ದಾರೆ.

ಮಾಂಡ್ಲಾ ಪೊಲೀಸರು ನೀಡಿದ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಪತಾಯಿ ಗ್ರಾಮದಿಂದ ಬಂಧಿಸಲಾಗಿದೆ. ಬಾಲಕಿಯನ್ನು ಮಂಡಲ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಡಿಯೋರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ ಪೆಕ್ಟರ್ ಶ್ರದ್ಧಾ ಉಕೇಯ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read