ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದಾಗ ಪ್ರತಿನಿತ್ಯ ಕಿರುಕುಳ; ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಪ್ರತಿದಿನ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಧ್ಯಪ್ರದೇಶದ ಭಾಂದರ್ ನಗರದಲ್ಲಿ 9 ನೇ ತರಗತಿಯ 14 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೋಚಿಂಗ್ ಕ್ಲಾಸ್‌ಗೆ ಹೋಗುವಾಗ ಆರೋಪಿ, 14 ವರ್ಷದ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಿರುಕುಳ ಸುಮಾರು ಒಂದು ವಾರದವರೆಗೆ ಮುಂದುವರೆದಿತ್ತು. ನಂತರ ಬಾಲಕಿ ತನ್ನ ತಾಯಿಗೆ ಘಟನೆಯ ಬಗ್ಗೆ ತಿಳಿಸಿದ್ದಳು. ಆಕೆಯ ತಾಯಿ ಆರೋಪಿ ಬಾಲಕನ ತಾಯಿಗೆ ಈ ಬಗ್ಗೆ ದೂರು ನೀಡಿದ್ದಾರೆ.

ಆದರ ನಂತರವೂ ಕಿರುಕುಳ ಮುಂದುವರೆದಿತ್ತು. ಬಾಲಕಿ ತನ್ನ ತಾಯಿಗೆ ಮತ್ತೊಮ್ಮೆ ಈ ಬಗ್ಗೆ ದೂರು ನೀಡಿದ್ದಳು. ಮತ್ತೆ ಆಕೆಯ ತಾಯಿ ಆರೋಪಿ ತಾಯಿಯ ಬಳಿಗೆ ಹೋಗಿ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಬಳಿಕ ಮನೆಗೆ ವಾಪಸ್ಸಾದಾಗ ತನ್ನ ಮಗಳು ನೇಣು ಬಿಗಿದುಕೊಂಡಿರುವುದನ್ನು ನೋಡಿ ಆಘಾತಕ್ಕೊಳಗಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಭಂಡಾರ್ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಗೃಹ ಸಚಿವ ನರೋತ್ತಮ್ ಮಿಶ್ರಾ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read