ಊಟ ಮಾಡುವಾಗಲೇ ಬಂದೆರಗಿತ್ತು ಸಾವು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಕಾಲೇಜು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಫ್ಯಾಶನ್ ಶೋ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಅದೇ ತೆರನಾದ ಮತ್ತೊಂದು ಘಟನೆ ನಡೆದಿದೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, NH 44 ರ ಮಾಲ್ತೋನ್ ಟೋಲ್ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಊಟಕ್ಕೆ ಕುಳಿತ್ತಿದ್ದಾಗಲೇ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇದರ ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಮೃತ ಸಿಬ್ಬಂದಿಯನ್ನು ಉದಲ್ ಯಾದವ್ ಎಂದು ಗುರುತಿಸಲಾಗಿದ್ದು, ಎಂದಿನಂತೆ ಊಟ ಮಾಡಲು ತನ್ನ ಕೋಣೆಗೆ ತೆರಳಿದ್ದಾನೆ. ಈ ಸಂದರ್ಭದಲ್ಲಿ ಆತ ಕುಸಿದು ಬಿದ್ದಿದ್ದು, ಸಹೋದ್ಯೋಗಿಗಳು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.

https://twitter.com/FreePressMP/status/1626851211394826242?ref_src=twsrc%5Etfw%7Ctwcamp%5Etw

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read