HomeIndiaಗುಂಡಿಕ್ಕಿ ಬಿಜೆಪಿ ನಾಯಕ, ಸಚಿವ ಕೈಲಾಶ್ ವಿಜಯವರ್ಗಿಯಾ ಸಹಾಯಕನ ಹತ್ಯೆ

ಗುಂಡಿಕ್ಕಿ ಬಿಜೆಪಿ ನಾಯಕ, ಸಚಿವ ಕೈಲಾಶ್ ವಿಜಯವರ್ಗಿಯಾ ಸಹಾಯಕನ ಹತ್ಯೆ

ಇಂದೋರ್: ಸ್ಥಳೀಯ ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ಮೋನು ಕಲ್ಯಾಣೆ ಅವರನ್ನು ಇಂದೋರ್‌ನಲ್ಲಿ ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿಯ ಯುವ ಮೋರ್ಚಾದ ನಗರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕಲ್ಯಾಣೆ, ವಿಜಯವರ್ಗಿಯಾ ಮತ್ತು ಅವರ ಮಗ ಮಾಜಿ ಶಾಸಕ ಆಕಾಶ್ ವಿಜಯವರ್ಗಿಯಾ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು.

ಪ್ರಾಥಮಿಕ ತನಿಖೆಯ ಪ್ರಕಾರ, ಹಳೆಯ ದ್ವೇಷದಿಂದ ಪ್ರೇರೇಪಿಸಲ್ಪಟ್ಟ ಪಿಯೂಷ್ ಮತ್ತು ಅರ್ಜುನ್ ಎಂಬ ಇಬ್ಬರು ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರದ ಚಿಮನ್‌ ಬಾಗ್‌ ನಲ್ಲಿ ಕೇಸರಿ ವಾಹನ ರ್ಯಾಲಿಗಾಗಿ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹಾಕುತ್ತಿದ್ದಾಗ ಕಲ್ಯಾಣ್ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಎದೆಗೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಕಲ್ಯಾಣ್ ಅವರನ್ನು ಅವರ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular