ಭೋಪಾಲ್: ಮಧ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಪತ್ನಿ, ಮಕ್ಕಳನ್ನು ಕೊಲೆ ಮಾಡಿ ಮನೆಯಲ್ಲೇ ಹೂತು ಹಾಕಿದ್ದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮಧ್ಯಪ್ರದೇಶದ ರತ್ಲಾಮ್ ನ ದೀದಿನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಡಲಿಯಿಂದ ಕೊಲೆ ಮಾಡಿ ತನ್ನ ಮನೆಯಲ್ಲಿ ಹೂತು ಹಾಕಿದ್ದಾನೆ. ಆರೋಪಿ 33-34 ವರ್ಷ ವಯಸ್ಸಿನವನಾಗಿದ್ದು, ರೈಲ್ವೇಯಲ್ಲಿ ಗ್ಯಾಂಗ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾನೆ: ರತ್ಲಾಮ್ ಎಸ್.ಪಿ. ಅಭಿಷೇಕ್ ತಿವಾರಿ ತಿಳಿಸಿದ್ದಾರೆ.
ಆರೋಪಿ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ. ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಾಪತ್ತೆಯಾಗಿರುವ ಪತ್ನಿ ಮತ್ತು ಮಕ್ಕಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಕೊಲೆಗೆ ವೈಯಕ್ತಿಕ ವಿವಾದವೇ ಕಾರಣ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್.ಪಿ. ಮಾಹಿತಿ ನೀಡಿದ್ದಾರೆ.
The accused & his associate arrested. Bodies have been recovered & sent for postmortem. The matter came to light when the police started searching for the missing wife & children. The reason for the murder is personal dispute. Further probe on: Abhishek Tiwari, SP Ratlam (22.01) pic.twitter.com/nqKMvSshkg
— ANI MP/CG/Rajasthan (@ANI_MP_CG_RJ) January 23, 2023